ಬಯಲಾಯ್ತು ಬಹಿರ್ದೆಸೆಗೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ ಪ್ರಕರಣದ ರಹಸ್ಯ: ಅಣ್ಣ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಬಾಲಕನಿಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರನನ್ನು ಬಂಧಿಸಲಾಗಿದೆ.

15 ವರ್ಷದ ಪ್ರಾಣೇಶ್ ಕೊಲೆಯಾದ ಬಾಲಕ. ಆರೋಪಿಯಾಗಿರುವ ಆತನ ಅಣ್ಣ ಶಿವಕುಮಾರ್(18) ನನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಚಟಕ್ಕೆ ಬಿದ್ದು ಶಿವಕುಮಾರ್ ತಮ್ಮನನ್ನೇ ಕೊಲೆ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ.

ಮೇ 15 ರಂದು ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಘಟನೆ ನಡೆದಿತ್ತು. ಬಹಿರ್ದೆಸೆಗೆ ತೆರಳಿದ್ದ ವೇಳೆಯಲ್ಲಿ ಪ್ರಾಣೇಶ್ ತಲೆ, ಎದೆ ಭಾಗಕ್ಕೆ ಹೊಡೆದು ಕೊಲೆ ಮಾಡಲಾಗಿತ್ತು. ಆನ್ಲೈನ್ ಗೇಮ್ ಆಡಲು ಮೊಬೈಲ್ ಕೊಡದ ಕಾರಣ ಶಿವಕುಮಾರ್ ತಮ್ಮನ ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿ ಏನೂ ತಿಳಿಯದಂತೆ ಶಿವಕುಮಾರ್ ಓಡಾಡಿಕೊಂಡಿದ್ದ. ಪೊಲೀಸರ ತನಿಖೆಯ ಹಾದಿ ತಪ್ಪಿಸಲು ಶಿವಕುಮಾರ್ ಮುಂದಾಗಿದ್ದ.

ಸುತ್ತಿಗೆ ಜೇಬಿನಲ್ಲಿ ಇಟ್ಟುಕೊಳ್ಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆಂಧ್ರಪ್ರದೇಶದ ಕರ್ನೂಲು ಜಿಲ್ಲೆ ಮಂತ್ರಾಲಯ ಮೂಲದ ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕಾಗಿ ಗ್ರಾಮಕ್ಕೆ ಬಂದು ದಂಪತಿ ನೆಲೆಸಿದ್ದರು. ತಂದೆ ತಾಯಿ ಜೊತೆಗೆ ಬಂದು ನೆಲೆಸಿದ್ದ ಪ್ರಾಣೇಶ್ ನನ್ನು ಅಣ್ಣನೇ ಹತ್ಯೆ ಮಾಡಿದ್ದಾನೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read