HomeEntertainmentನಾಳೆ ಬಿಡುಗಡೆಯಾಗಲಿದೆ 'ಸಂಭವಾಮಿ ಯುಗೇ ಯುಗೇ' ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್

ನಾಳೆ ಬಿಡುಗಡೆಯಾಗಲಿದೆ ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್

ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಚೇತನ್ ಚಂದ್ರಶೇಖರ್ ನಿರ್ದೇಶನದ ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಮೊದಲ ಹಂತದ ಶೂಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದೆ.

ಈ ಸಿನಿಮಾದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಅನ್ನು ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತಾಗಿ ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.

ಈ ಚಿತ್ರದಲ್ಲಿ ಜೈ ಶೆಟ್ಟಿ, ಸೇರಿದಂತೆ ಸುಧಾರಾಣಿ, ಪ್ರಮೋದ್ ಶೆಟ್ಟಿ, ಅಶೋಕ್, ನಿಶಾ ಗುರುನಾಥ್ ಸಿಂಗ್ ರಜ್ಪುತ್, ಮಧುರ ಗೌಡ, ಮತ್ತು ಅಭಯ್ ಪುನೀತ್  ತಾರಾಂಗಣದಲ್ಲಿದ್ದಾರೆ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರತಿಭಾ ನರೇಶ್ ನಿರ್ಮಾಣ ಮಾಡಿದ್ದಾರೆ. ಪುರಾತನ್ ಶೆಟ್ಟಿಗಾರ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://x.com/aanandaaudio/status/1791762187708461178

For Latest News Updates, Join Our Whatsapp Community🚩
RELATED ARTICLES

Most Popular