ಕಾರವಾರ: ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ.
16 ವರ್ಷದ ಸಾಜಿದ್ ಶೇಖ್ ಸಿಡಿಲು ಬಡಿದು ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಬನವಾಸಿಯ ಕದಂಬ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಸಿಡಿಲು ಬಡಿದು ಸಾಜಿದ್ ಶೇಖ್ ಮೃತಪಟ್ಟಿದ್ದಾನೆ. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.