HomeKarnatakaBIG NEWS: ಐಪಿಎಲ್ ಬೆಟ್ಟಿಂಗ್: ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು

BIG NEWS: ಐಪಿಎಲ್ ಬೆಟ್ಟಿಂಗ್: ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು

ರಾಯಚೂರು: ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಮುದಿಬಸವ (24) ಮೃತ ಯುವಕ. ಲಾಡ್ಜ್ ರೂಮಿನಲ್ಲಿಯೇ ಯುವಕ ನೇಣಿಗೆ ಶರಣಾಗಿದ್ದಾನೆ. ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ ಬೆಟ್ಟಿಂಗ್ ನಿಂದ ಹೆಚ್ಚು ಹಣ ಮಾಡಬಹುದು ಎಂದುಕೊಂಡಿದ್ದ. ಆದರೆ ಬೆಟ್ಟಿಂಗ್ ನಲ್ಲಿ ಲಕ್ಷಾತಂರ ಹಣ ಕಳೆದುಕೊಂಡಿದ್ದಾನೆ. ಮನನೊಂದ ಯುವಕ ಸಿಂಧನೂರಿನ ಸಾಯಿ ರೆಸಿಡೆನ್ಸಿ ಲಾಡ್ಜ್ ರೂಮಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಿಗ್ಗೆ ಎಷ್ಟು ಹೊತ್ತಾದರೂ ಯುವಕ ರೂಮಿನಿಂದ ಹೊರಬಂದಿಲ್ಲ. ಅನುಮಾನಗೊಂಡು ಲಾಡ್ಜ್ ಸಿಬ್ಬಂದಿಗಳು ಪರುಶೀಲಿಸಿದಾಗ ಯುವಕ ಮುದಿಬಸವ ರೂಮಿನ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಂಧನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular