alex Certify ತೊಡೆ ಮೇಲೆ ಹುಡುಗಿ ಕೂರಿಸಿಕೊಂಡು ಬೈಕ್ ಸವಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೊಡೆ ಮೇಲೆ ಹುಡುಗಿ ಕೂರಿಸಿಕೊಂಡು ಬೈಕ್ ಸವಾರಿ

ಬೆಂಗಳೂರಿನ ಫ್ಲೈಓವರ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯನ್ನು ತನ್ನ ಮಡಿಲಲ್ಲಿ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಗಮನಿಸಿದ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚಿದ್ದಾರೆ.

ಮಹಿಳೆ ಬೈಕರ್‌ ಮಡಿಲಲ್ಲಿ ಕುಳಿತುಕೊಂಡು ಕೈಗಳನ್ನು ಅವನ ಕುತ್ತಿಗೆಗೆ ಸುತ್ತಿಕೊಂಡಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ. ಉತ್ತರ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು ಸಂಚಾರಿ ಪೊಲೀಸರು ಬೈಕ್‌ನ ನಂಬರ್ ಪ್ಲೇಟ್ ಮತ್ತು ಸಿಸಿಟಿವಿ ದೃಶ್ಯಗಳನ್ನು ಬಳಸಿ ಪುರುಷ ಮತ್ತು ಮಹಿಳೆಯನ್ನು ಪತ್ತೆ ಮಾಡಿದ್ದಾರೆ. ಅಪರಾಧಿಯನ್ನು ಪತ್ತೆ ಮಾಡಿದ್ದು, ಅವರು ಈ ಹಿಂದೆ ಮಾಡಿದ ಉಲ್ಲಂಘನೆಗಳ ಪಟ್ಟಿಯನ್ನು ನಾವು ಪತ್ತೆಹಚ್ಚುತ್ತೇವೆ ಎಂದು ಬೆಂಗಳೂರಿನ ಸಂಚಾರ ಉತ್ತರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...