HomeKarnatakaBREAKING NEWS: ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್...

BREAKING NEWS: ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿದೆ.

ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಇದ್ದರು. ಆಂಧ್ರಪ್ರದೇಶ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಡರಾತ್ರಿ ಎರಡು ಗಂಟೆಯಾದರೂ ಪಾರ್ಟಿ ನಡೆಯುತ್ತಿತ್ತು. ಅವಧಿ ಮೀರಿ ಪಾರ್ಟಿ ನಡೆಸಿದ್ದು, ಡ್ರಗ್ಸ್ ಬಳಕೆ ಮಾಡಲಾಗಿದೆ. ಹೈದರಾಬಾದ್ ಮೂಲದ ವಾಸು ಪಾರ್ಟಿ ಆಯೋಜಿಸಿದ್ದು, ಒಂದು ಬೆಂಜ್ ಕಾರ್ ನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಶಾಸಕ ಕಾಕನಿ ಗೋವರ್ಧನ ರೆಡ್ಡಿ ಹೆಸರಿನ ಪಾಸ್ ಪತ್ತೆಯಾಗಿದೆ. ಪೊಲೀಸರ ದಾಳಿ ವೇಳೆ 15ಕ್ಕೂ ಹೆಚ್ಚು ಕಾರ್ ಗಳು ಕಂಡುಬಂದಿವೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular