HomeKarnatakaಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ.

ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದಲ್ಲಿ ಸಂಪುಟ ಸಣ್ಣ ಪ್ರಮಾಣದಲ್ಲಿ ಪುನಾರಚನೆ ಆಗಲಿದೆ. ಅಸಮರ್ಥರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡಬಹುದು. ಕಾಂಗ್ರೆಸ್ ಗೆ ಕಡಿಮೆ ಸ್ಥಾನಗಳು ಬಂದಲ್ಲಿ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸುವ ಸಾಧ್ಯತೆ ಇದೆ. ಇದರಿಂದ ಮಕ್ಕಳು ಮತ್ತು ಕುಟುಂಬ ಸದಸ್ಯರನ್ನು ಕಣಕ್ಕಿಳಿಸಿದ ಸಚಿವರಿಗೆ ನೇರವಾಗಿ ಬಿಸಿ ತಟ್ಟುವ ಸಾಧ್ಯತೆ ಇದೆ.

ಸಂಪುಟದ ಸದಸ್ಯರ ಕುಟುಂಬದವರು ಸೋತಲ್ಲಿ ಸಂಬಂಧಿಸಿದ ಸಚಿವರು ನೈತಿಕ ಹೊಣೆ ಹೊತ್ತು ಸಂಪುಟದಿಂದ ಹೊರಗೂಳಿಯಬೇಕಾಗುತ್ತದೆ. ಲೋಕಸಭೆ ಚುನಾವಣೆ ಫಲಿತಾಂಶ ಕೆಲವು ಸಚಿವರ ಭವಿಷ್ಯವನ್ನು ನಿರ್ಧರಿಸಲಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಸಂಪುಟ ಪುನಾರಚನೆಯ ಕುರಿತಾಗಿ ಚರ್ಚೆಗಳು ಆರಂಭವಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಅಭ್ಯರ್ಥಿಗಳ ಕೊರತೆಯ ಕಾರಣ ಸಚಿವರ ಮಕ್ಕಳು ಮತ್ತು ಕುಟುಂಬ ಸದಸ್ಯರನ್ನು ಕಣಕ್ಕಿಳಿಸಲಾಗಿತ್ತು. ಕುಟುಂಬ ರಾಜಕಾರಣದ ಆರೋಪ ಬಂದರೂ ಕೂಡ ಇದನ್ನು ಪ್ರಯೋಗವಾಗಿ ಸ್ವೀಕರಿಸಿದ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಸಚಿವರಿಗೆ ನೀಡಿತ್ತು. ಒಂದು ವೇಳೆ ಕುಟುಂಬದವರು ಪರಾಭವಗೊಂಡಲ್ಲಿ ಸಚಿವರ ತಲೆದಂಡವಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular