ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಆಗಿದೆ.
ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ. 5 ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಹೆಚ್.ಡಿ.ರೇವಣ್ಣ ಕೋರ್ಟ್ ಮೊರೆ ಹೋಗಿದ್ದರು. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿ ಮೇ 16ರಂದು ಇಂದು ಮಧ್ಯಾಹ್ನದವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ ಮತ್ತೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್ಐಟಿ ಪರ ವಕೀಲರ ಹಾಗೂ ರೇವಣ್ಣ ಪರ ವಕೀಲರ ವಾದ-ಪ್ರತಿವಾದ ಆಲಿಸಿತ್ತು. ಈ ವೇಳೆ ಮೇ 20ಕ್ಕೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದ ಕೋರ್ಟ್, ಸೋಮವಾರದವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರೆಯಲಿದೆ ಎಂದು ತಿಳಿಸಿತ್ತು.