ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.
ರಾಜ್ಯದ ಅನೇಕ ಖಾಸಗಿ ಶಾಲೆಗಳು ಬೇಸಿಗೆ ರಜೆ ಕಡಿತಗೊಳಿಸಿ ಮೇ ತಿಂಗಳಿಂದ ತರಗತಿಗಳನ್ನು ಆರಂಭಿಸಿ ಮಕ್ಕಳ ಹಕ್ಕುಗಳನ್ನು ಉಲ್ಲನಿಸಿವೆ. ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ.
ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಿದ ಪ್ರಕಾರವೇ ಶಾಲೆಗಳನ್ನು ಪ್ರಾರಂಭಿಸಿ ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರುಗಳಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಸೂಚನೆ ನೀಡಿದ್ದಾರೆ.