HomeKarnatakaಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ.

ಸೋಮವಾರ ಒಟ್ಟು 12 ಮಂದಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಒಬ್ಬರು ಮಹಿಳೆ ಮತ್ತು 77 ಪುರುಷರು ಕಣದಲ್ಲಿ ಉಳಿದಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಬಂಡಾಯ ಎದುರಾಗಿದೆ.

ಪ್ರಚಾರದ ಭರಾಟೆ ಜೋರಾಗಿದ್ದು, ಪದವೀಧರ ಮತ್ತು ಶಿಕ್ಷಕ ಮತದಾರರನ್ನು ಭೇಟಿಯಾಗಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮತಯಾಚಿಸತೊಡಗಿದ್ದಾರೆ. ಜೂನ್ 3 ರಂದು ಮತದಾನ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular