alex Certify 5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5, 8, 9ನೇ ಕ್ಲಾಸ್ ಮಕ್ಕಳಿಗೆ ಮುಂದಿನ ತರಗತಿ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಈ ಹಿಂದೆ ನಡೆಸಿದ್ದ ಎಫ್ಎ -1, 2, 3, 4 ಮತ್ತು ಎಸ್ಎ -1ರ ಮೌಲ್ಯಾಂಕನ ಆಧರಿಸಿ ಫಲಿತಾಂಶ ಪ್ರಕಟಿಸುವಂತೆ ಶಿಕ್ಷಣ ಇಲಾಖೆ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ. ಈ ಮೂಲಕ 2024 -25 ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಇದ್ದ ತೊಡಕಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ.

ಇದರಿಂದಾಗಿ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗೆ ಪ್ರವೇಶಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಮೌಲ್ಯಾಂಕನ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಅತಂತ್ರರಾಗಿದ್ದ ವಿದ್ಯಾರ್ಥಿಗಳು, ಪೋಷಕರು ನಿರಾಳರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...