HomeKarnatakaಕೆಲಸ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮಾರಾಟ ಶಂಕೆ: ಮೂವರ ವಿರುದ್ಧ ಎಫ್ಐಆರ್ ದಾಖಲು

ಕೆಲಸ ಕೊಡಿಸುವುದಾಗಿ ಕರೆದೊಯ್ದು ಮಹಿಳೆ ಮಾರಾಟ ಶಂಕೆ: ಮೂವರ ವಿರುದ್ಧ ಎಫ್ಐಆರ್ ದಾಖಲು

ದಾವಣಗೆರೆ: ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮಾರಾಟ ಮಾಡಿದ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಕೇಸು ದಾಖಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ರೋಜಿ ಲಿನಾ(43), ಮಲ್ಲಿಕಾರ್ಜುನ(47), ಲೋಕೇಶ(35) ಅವರ ವಿರುದ್ಧ ಕೇಸ್ ದಾಖಲಾಗಿದೆ.

ಇವರು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗ್ರಾಮವೊಂದರ ಮಹಿಳೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಮಾರಾಟ ಮಾಡಿದ್ದಾರೆ ಎಂದು ಮಹಿಳೆಯ ಸಹೋದರ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತಿ ನಿಧನದ ನಂತರ ಮಹಿಳೆ ಕಲ್ಯಾಣ ಮಂಟಪಗಳಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಮೇ 12ರಂದು ಮನೆಯಿಂದ ಶಿವಮೊಗ್ಗಕ್ಕೆ ತೆರಳಿದ್ದ ಅವರು ವಾಪಸ್ ಬಂದಿರಲಿಲ್ಲ. ಬೇರೊಬ್ಬರ ಮೊಬೈಲ್ ನಿಂದ ಸಹೋದರನಿಗೆ ಮಹಿಳೆ ಕರೆ ಮಾಡಿದ್ದಾರೆ. ಒಂದು ಲಕ್ಷ ರೂಪಾಯಿಗೆ ಸೊಲ್ಲಾಪುರದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದು, ಹಣ ಕೊಟ್ಟರಷ್ಟೇ ಬಿಡುವುದಾಗಿ ಸಹೋದರನಿಗೆ ಮಹಿಳೆ ಹೇಳಿದ್ದಾರೆ. ಮಾಹಿತಿ ಆಧರಿಸಿ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular