alex Certify BREAKING : ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

ಮೈಸೂರು : ಮೈಸೂರಿನ  ಡಿ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಸಾಲುಂಡಿ ಗ್ರಾಮದ ಕನಕರಾಜು ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಗ್ರಾಮಕ್ಕೆ ಸರಬರಾಜು ಮಾಡುವ ಕುಡಿಯುವ ನೀರು ಕಲುಷಿತಗೊಂಡಿದ್ದ ಹಿನ್ನೆಲೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...