HomeKarnatakaBREAKING NEWS: ಪತಿಯಿಂದಲೇ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

BREAKING NEWS: ಪತಿಯಿಂದಲೇ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

ಮೈಸೂರು: ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನಟಿ ವಿದ್ಯಾ ಅವರನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಪತಿ ನಂದೀಶ್, ಪತ್ನಿ ವಿದ್ಯಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ತುರಗನೂರಿನಲ್ಲಿ ಈ ಘಟನೆ ನಡೆದಿದೆ.

ಕೌಟುಂಬಿಕ ಕಲಹದಿಂದಾಗಿ ಪತ್ನಿ ಮೇಲೆ ನಂದೀಶ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಜಗಳವಾಗಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದ್ದು, ಪತ್ನಿ ವಿದ್ಯಾ ಮೇಲೆ ಪತಿ ನಂದೀಶ್ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದಾಗಿ ವಿದ್ಯಾ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular