alex Certify ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಯುವಕ ಬಲಿ-ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಲ್ಲಿ ಕಲುಷಿತ ನೀರು ಸೇವಿಸಿ ಯುವಕ ಬಲಿ-ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ

ಮೈಸೂರು : ಮೈಸೂರಿನ ಡಿ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು ಹಾಗೂ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...