ಬೆಂಗಳೂರು: ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾವೇರಿಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ರೈತರು ಸಾಲುಗಟ್ಟಿ ನಿಂತಿರುವ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷಿ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ತಕ್ಷಣವೇ ಕೃಷಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ರೈತರಿಗೆ ಅಗತ್ಯವಿರುವ ಬೀಜ, ಗೊಬ್ಬರದ ದಾಸ್ತಾನು ಬಗ್ಗೆ ಮಾಹಿತಿ ಪಡೆದುಕೊಳ್ಳಿ. ಮುಂಗಾರು ಕೃಷಿಗೆ ರೈತರಿಗೆ ತೊಂದರೆಯಾಗದಂತೆ ಬೀಜ, ಗೊಬ್ಬರ ಪೂರೈಸಲು ಅಗತ್ಯಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಯಾವುದೇ ಕಾರಣಕ್ಕೂ ಕೊರತೆಯಾಗದ ಹಾಗೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ನನ್ನ ಗಮನಕ್ಕೆ ಬಂದ ಕೂಡಲೆ ಕೃಷಿ ಸಚಿವರಾದ…
— Siddaramaiah (@siddaramaiah) May 21, 2024

