HomeKarnatakaBIG NEWS: ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ

BIG NEWS: ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇಡಲು ಸರ್ಕಾರ ಮುಂದಾಗಿದೆ ಜಾತಿ ಗಣತಿಗೆ ಸಂಪುಟ ಉಪ ಸಮಿತಿ ರಚಿಸಲು ಚಿಂತನೆ ನಡೆಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಸಾಮಾಜಿಕ, ಶೈಕ್ಷಣಿಕ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಸಂಪುಟ ಸದಸ್ಯರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ಹೇಳಿದ್ದು, ಚುನಾವಣೆ ನೀತಿ ಸಂಹಿತೆ ಮುಕ್ತಾಯದ ಬಳಿಕ ಜಾತಿ ಗಣತಿ ವಿಚಾರ ವರದಿ ಅನುಷ್ಠಾನಕ್ಕೆ ಚಿಂತನೆ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ ಗಣತಿ ವರದಿ ಪರಾಮರ್ಶೆ ಸಂಬಂಧ ಸಂಪುಟ ಉಪ ಸಮಿತಿ ರಚಿಸುವುದು ಸರ್ಕಾರ ಉದ್ದೇಶವಾಗಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅನುಕೂಲದ ದೃಷ್ಟಿಯಿಂದ ಜಾತಿಗಣತಿ ಲಾಭ ಪಡೆಯಲು ಸರ್ಕಾರ ಯೋಜಿಸುವ ಸಾಧ್ಯತೆ ಇದೆ. ಪ್ರಬಲ ಸಮುದಾಯಗಳು ಮತ್ತೆ ವಿರೋಧ ವ್ಯಕ್ತಪಡಿಸಿದರೆ ಇಕ್ಕಟ್ಟು ಎದುರಾಗಲಿದೆ. ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ ವರದಿಯನ್ನು ಸಂಪುಟ ಉಪ ಸಮಿತಿ ಅಧ್ಯಯನ ಮಾಡಿ ಬಳಿಕ ಮುಂದಿನ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular