alex Certify ಮೇ 28 ರವರೆಗೆ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 28 ರವರೆಗೆ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಕಡೆ ಮೇ 28ರ ವರೆಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು, ಮಂಡ್ಯ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...