HomeKarnatakaBREAKING : ಮೈಸೂರಲ್ಲಿ ದಾರುಣ ಘಟನೆ ; ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು..!

BREAKING : ಮೈಸೂರಲ್ಲಿ ದಾರುಣ ಘಟನೆ ; ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು..!

ಮೈಸೂರು : ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ಅಪ್ಪ -ಅಮ್ಮ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತರನ್ನು ಕುಮಾರಸ್ವಾಮಿ (45)  ಮಂಜುಳಾ ಹಾಗೂ ಮಕ್ಕಳಾದ ಅರ್ಚನಾ  ಸ್ವಾತಿ ಎಂದು ಗುರುತಿಸಲಾಗಿದೆ. ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ ಅಥವಾ ಮನೆಯಲ್ಲಿ ಯಾವುದಾದರೂ ಅವಘಡ ಸಂಭವಿಸಿದ್ಯಾ ಎಂಬುದು ತಿಳಿದು ಬರಬೇಕಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular