HomeEntertainmentBREAKING NEWS: ಖ್ಯಾತ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

BREAKING NEWS: ಖ್ಯಾತ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಭಿಮಾನಿಗಳಲ್ಲಿ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತವಾಗಿದೆ.

ಮಂಗಳವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ಮತ್ತು ಸನ್‌ರೈಸರ್ಸ್ ಹೈದರಾಬಾದ್(ಎಸ್‌ಆರ್‌ಹೆಚ್) ಐಪಿಎಲ್ ಪಂದ್ಯದ ವೇಳೆ ಬಿಸಿ ಅಲೆಯ ಪರಿಸ್ಥಿತಿಯಿಂದಾಗಿ ಶಾರುಖ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. IPL 2024 ರ ಮೊದಲ ಪ್ಲೇಆಫ್ ಪಂದ್ಯದಲ್ಲಿ SRH ವಿರುದ್ಧ KKR ತಂಡ ಬೆಂಬಲಿಸಲು ಶಾರುಖ್ ಖಾನ್ ಅಹಮದಾಬಾದ್‌ನಲ್ಲಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾರುಖ್ ಖಾನ್ ಮಾಲೀಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್(KKR) IPL 2024 ರ ಫೈನಲ್‌ಗೆ ತಲುಪಿತು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಟದಲ್ಲಿ ನಟ ಮತ್ತು ಅವರ ಮಕ್ಕಳಾದ ಅಬ್ರಾಮ್, ಸುಹಾನಾ, ಅನನ್ಯಾ ಮತ್ತು ಶಾನಯಾ ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular