HomeKarnatakaBREAKING NEWS: ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್ ಜಾರಿ

BREAKING NEWS: ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್ ಜಾರಿ

ಬೆಂಗಳೂರು: ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ.

ಬಿಜೆಪಿ ಶಿಸ್ತು ಪಾಲನಾ ಸಮಿತಿ ರಘುಪತಿ ಭಟ್ ಗೆ ನೋಟಿಸ್ ಜಾರಿ ಮಾಡಿದ್ದು, ಎರಡು ದಿನಗಳ ಒಳಗಾಗಿ ಉತ್ತರ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.

ನೈಋತ್ಯ ಪದವೀಧರ ಕ್ಷೇತ್ರದಿಂದ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಬಂಡಾಯ ಸ್ಪರ್ಧೆಗೆ ಸ್ಪಷ್ಟನೆ ನೀಡಿ ಎರಡು ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಶಾಸಕ ಸುನೀಲ್ ಕುಮಾರ್, ರಘುಪತಿ ಭಟ್ ಅವರಿಗೆ 24 ಗಂಟೆಯೊಳಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಇಲ್ಲವಾದಲ್ಲಿ ಪಕ್ಷದಿಂದ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಶಾಕ್ ಎದುರಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular