ಮೈಸೂರಿನ ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ. ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಇಡೀ ಕುಟುಂಬ ದುರಂತ ಸಾವಿಗೀಡಾಗಿತ್ತು. ಈ ಘಟನೆ ದುಃಖಕರವಾದದ್ದು. ಇಂದು ಮೃತರ ಸಂಬಂಧಿಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದು, ಮೃತರಿಗೆ ತಲಾ 3 ಲಕ್ಷ ರೂ.ನಂತೆ ನತದೃಷ್ಟ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು ತಾಲೂಕಿನ ಜಯಪುರದ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಕಾಂತರಾಜು ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಕುಟುಂಬದವರಿಗೆ ಸಾಂತ್ವನ ಹೇಳಿದ್ದು, ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಮೃತ ಕಾಂತರಾಜು ಅವರ ಪುತ್ರ ರವಿಗೆ ಉದ್ಯೋಗ ನೀಡುವುದಾಗಿ ಘೋಷಿಸಿದ್ದಾರೆ.
https://twitter.com/siddaramaiah/status/1793630814053577146
https://twitter.com/siddaramaiah/status/1793648160038146306