
ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರೋದ್ರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.
ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಜೂನ್ 3 ರವರೆಗೆ ಬಾರ್ ಬಂದ್ ಆಗಲಿದೆ. ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್ಸಿ ಮತ ಎಣಿಕೆ ಇರುವುದರಿಂದ ಅಂದೂ ಸಹ ಬಾರ್ ಬಂದ್ ಆಗಲಿದೆ. ಒಟ್ಟಿನಲ್ಲಿ 1 ವಾರ ಮದ್ಯ ಮಾರಾಟ ಬಂದ್ ಆಗಲಿದೆ.

