HomeKarnatakaನನಗೆ ಹಾಗೂ ನನ್ನ ಮಗನಿಗೆ ಜೀವ ಬೆದರಿಕೆ ಇದೆ; ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಹೇಳಿಕೆ

ನನಗೆ ಹಾಗೂ ನನ್ನ ಮಗನಿಗೆ ಜೀವ ಬೆದರಿಕೆ ಇದೆ; ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ ಹೇಳಿಕೆ

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಲಭ್ಯವಾಗಿದ್ದು, ಪಾಲುದಾರರಿಂದಾದ ಮೋಸ, ವಂಚನೆ ಹಾಗೂ 60 ಕೋಟಿ ನಷ್ಟದ ಬಗ್ಗೆ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೌಂದರ್ಯ ಜಗದೀಶ್ ಅವರ ಮೂವರು ಬ್ಯುಸಿನೆಸ್ ಪಾರ್ಟನರ್ ಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ, ಪತಿ ಸಾವಿನ ನೋವಿಂದ ನಾವಿನ್ನೂ ಹೊರಬಂದಿಲ್ಲ. ಮನೆಯಲ್ಲಿ ಅವರ ಬಟ್ಟೆಗಳನ್ನು ತೆಗೆಯುವಾಗ ಡೆತ್ ನೋಟ್ ಇತ್ತು. ಡೆತ್ ನೋಟ್ ನಲ್ಲಿ ಪಾಲುದಾರರ ಬಗ್ಗೆ ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ನನ್ನ ಹಾಗೂ ನನ್ನ ಮಗನಿಗೆ ಜೀವ ಬೆದರಿಕೆ ಇದೆ. ಪಾಲುದಾರರು ನನ್ನ ಗಂಡನಿಂದ ಖಾಲಿ ಪೇಪರ್ ಗೆ ಸಹಿ ಹಾಕಿಸಿಕೊಂಡಿದ್ದಾರೆ. ಪಾಲುದಾರರಿಗೆ ಕೋಟ್ಯಂತರ ಮೌಲ್ಯದ ಭೂಮಿ ಬಿಟ್ಟುಕೊಟ್ಟಿದ್ರು. ಎಲ್ಲರಿಂದಲೂ ನನ್ನ ಪತಿಗೆ ಮೋಸವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular