HomeKarnatakaBREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

BREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೂಡ್ಲೂರು ಗೇಟ್ ಬಳಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ಮೂಲದ 2 ವರ್ಷದ ಮಗು ವಿಕ್ರಾಂತ್ ಹಾಗೂ ಕಾರು ಚಾಲಕ ಪೃಥ್ವಿ (36) ಮೃತ ದುರ್ದೈವಿಗಳು. ಐವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುರುಡೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯರಸ್ತೆಯನ್ನು ಬಂದ್ ಮಾಡಲಾಗಿತ್ತು. ಆದರೆ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿರಲಿಲ್ಲ. ಮುಖ್ಯ ರಸ್ತೆ ಬಂದ್ ಆಗಿದ್ದರಿಂದ ಬೈಪಾಸ್ ತಿರುವು ಪಡೆಯಲು ಹೋಗಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular