HomeIndiaBREAKING : ಛತ್ತೀಸ್ ಗಢದ ಗನ್ ಪೌಡರ್ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ; 17 ಮಂದಿ...

BREAKING : ಛತ್ತೀಸ್ ಗಢದ ಗನ್ ಪೌಡರ್ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ; 17 ಮಂದಿ ಸಾವು

ಛತ್ತೀಸ್ ಗಢದಲ್ಲಿ ಶನಿವಾರ ಬೆಳಿಗ್ಗೆ ಭಯಾನಕ ಘಟನೆ ನಡೆದಿದ್ದು, ಬೆಮೆತಾರಾ ಜಿಲ್ಲೆಯ ಬೆರ್ಲಾ ಬ್ಲಾಕ್ನ ಬೋರ್ಸಿ ಗ್ರಾಮದ ಗನ್ಪೌಡರ್ ಉತ್ಪಾದನಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ. ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಇಡೀ ಕಟ್ಟಡ ಕುಸಿದಿದೆ. ಉದ್ಯಮದಲ್ಲಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದಾರೆ.

ಕಾರ್ಖಾನೆಯಲ್ಲಿ ಸ್ಫೋಟದ ಶಬ್ದ ಕೇಳಿದಾಗ ಸ್ಥಳೀಯರು ಆಘಾತಕ್ಕೊಳಗಾಗಿದ್ದಾರೆ. ಘಟನೆಯ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು. 17 ಶವಗಳನ್ನು ಅವಶೇಷಗಳಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular