HomeEntertainment'ದ ಜಡ್ಜ್ ಮೆಂಟ್' ಚಿತ್ರದ ಮತ್ತೊಂದು ಹಾಡು ರಿಲೀಸ್

‘ದ ಜಡ್ಜ್ ಮೆಂಟ್’ ಚಿತ್ರದ ಮತ್ತೊಂದು ಹಾಡು ರಿಲೀಸ್

ಗುರುರಾಜ್ ಕುಲಕರ್ಣಿ ನಿರ್ದೇಶನದ ‘ದ ಜಡ್ಜ್ ಮೆಂಟ್’ ಚಿತ್ರ ಮೊನ್ನೆಯಷ್ಟೇ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ಜಡ್ಜ್ಮೆಂಟ್ ನ ಮತ್ತೊಂದು ಲಿರಿಕಲ್ ಹಾಡನ್ನು ಯೂಟ್ಯೂಬ್  ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ರೋಡಾಕ್ ಧ್ವನಿಯಾಗಿದ್ದು, ವಿನೀತ್ ರಾಜ್ ಮೆನನ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಚಿತ್ರದಲ್ಲಿ ರವಿಚಂದ್ರನ್ ಸೇರಿದಂತೆ ದೂದ್ ಪೇಡ ದಿಗಂತ್, ಧನ್ಯ ರಾಮ್ ಕುಮಾರ್, ಮತ್ತು ಮೇಘನಾ ಗಾಂವ್ಕರ್ ಮುಖ್ಯಭೂಮಿಕೆಯಲ್ಲಿದ್ದು, ಲಕ್ಷ್ಮಿ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಟಿ.ಎಸ್. ನಾಗಾಭರಣ, ಕೃಷ್ಣ ಹೆಬ್ಬಾಳೆ, ಸುಜಯ್ ಶಾಸ್ತ್ರಿ, ರಾಜೇಂದ್ರ ಕಾರಂತ್, ರವಿಶಂಕರ್ ಗೌಡ, ಸೂರ್ಯ ರವಿಶಂಕರ್ ಗೌಡ, ರೂಪ ರಾಯಪ್ಪ ಉಳಿದ ಪಾತ್ರವರ್ಗದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿ 9 ಕಮ್ಯುನಿಕೇಶನ್ ಮೀಡಿಯಾ ಮತ್ತು ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಶರದ್ ಬಿ ನಾಡಗೌಡ, ವಿಶ್ವನಾಥ್ ಗುಪ್ತಾ, ರಾಮು ರಾಯಚೂರು, ರಾಜಶೇಖರ್ ಪಾಟೀಲ್, ಪ್ರತಿಮಾ ಬಿರಾದಾರ್ ನಿರ್ಮಾಣ ಮಾಡಿದ್ದಾರೆ. ಬಿ.ಎಸ್. ಕೆಂಪರಾಜು ಸಂಕಲನ, ವೀರೇಶ್, ವಿಷ್ಣು ಮತ್ತು ಪ್ರೀತಿ ಅವರ ಛಾಯಾಗ್ರಹಣವಿದೆ. ರವಿವರ್ಮ ಸಾಹಸ ನಿರ್ದೇಶನ, ಎಂಎಸ್ ರಮೇಶ್ ಸಂಭಾಷಣೆ, ರಾಮ್ ಕಿರಣ್ ನೃತ್ಯ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular