ಕೊಲ್ಕತ್ತ: ಬಂಗಾಳಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಆರ್ಭಟಿಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಬಾಂಗ್ಲಾ ತೀರದಿಂದ ಪಶ್ಚಿಮ ಬಂಗಾಳದ ತೀರಕ್ಕೆ ಚಂಡಮಾರುತ ಅಪ್ಪಳಿಸಿದೆ. ಪಶ್ಚಿಮ ಬಂಗಾಳದ ಸಮುದ್ರ ತೀರಕ್ಕೆ ರೆಮಲ್ ಚಂಡಮಾರುತ ಅಪ್ಪಳಿಸಿದ್ದು, ಕರಾವಳಿ ಪ್ರದೇಶ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆ ಆಗುತ್ತಿದೆ.
ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದ ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಆಗುತ್ತಿದ್ದು, ಕೊಲ್ಕತ್ತಾ ನಗರದ ಹಲವು ಕಡೆಗಳಲ್ಲಿ ಮರಗಳು ಧರೆಗೆ ಉರುಳಿವೆ. ರಸ್ತೆಗಳು ಜಲಾವೃತಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರ ತೀರದಲ್ಲಿ ಕಟ್ಟಿಚ್ಚರ ವಹಿಸಲಾಗಿದೆ. ರೈಲುಗಳು, ವಿಮಾನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಂಡಮಾರುತ ಕಾರಣ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎನ್.ಡಿ.ಆರ್.ಎಫ್. ತಂಡಗಳನ್ನು ನಿಯೋಜಿಸಲಾಗಿದೆ.