35 ಮಂದಿ ಸಾವಿಗೆ ಕಾರಣವಾದ ರಾಜಕೋಟ್ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ: ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಲು ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಗುಜರಾತ್ ನ ರಾಜಕೋಟ್ ಗೇಮ್ ಜೋನ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ 35 ಮಂದಿ ಸಾವನ್ನಪ್ಪಿದ್ದು, ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಕಿ ಅನಾಹುತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್‌ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳಂತಹ ಹೆಚ್ಚಿನ ಜನದಟ್ಟಣೆಯ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಅನುಸರಣೆ ಅತ್ಯಂತ ಮಹತ್ವದ್ದಾಗಿದೆ. ಅಗ್ನಿ ಅವಘಡಗಳನ್ನು ತಪ್ಪಿಸಲು ನಿಯತಕಾಲಿಕ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸಲು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಗುಜರಾತ್ ನ ರಾಜಕೋಟ್ ನಲ್ಲಿ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ಕಳವಳಕಾರಿ ದುರ್ಘಟನೆಯಾಗಿದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್ ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಜೋನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ.

ಇಂತಹ ಮನರಂಜನಾ ಕೇಂದ್ರಗಳು, ಗೇಮ್ ಜೋನ್ ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಮನರಂಜನಾ ಕೇಂದ್ರ, ಗೇಮಿಂಗ್ ಜೋನ್ ಗಳಿರುವ ಪ್ರದೇಶಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಲು, ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿರ್ಬಂಧಗಳನ್ನು ಪಾಲನೆ ಮಾಡಲಾಗುತ್ತದೆಯೇ ಎಂಬುದನ್ನು ಪರಿಶೀಲಿಸಲು, ಯಾವುದೇ ದುರ್ಘಟನೆಗಳನ್ನು ಸಂಭವಿಸಿದಂತೆ ಕ್ರಮ ವಹಿಸಲು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

https://twitter.com/DKShivakumar/status/1794692567294148928

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read