ಬೆಂಗಳೂರು : ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಬನಶಂಕರಿಯ ಕೆ ಆರ್ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ಅಪರಿಚಿತರು ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ನಟ ಧ್ರುವ ಸರ್ಜಾ ನಿವಾಸದ ರಸ್ತೆಯಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದು, ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬನಶಂಕರಿ ಠಾಣೆಯಲ್ಲಿ ದೂರು ನೀಡಲು ಅವರು ನಿರ್ಧಾರ ಮಾಡಿದ್ದು, ಪೊಲೀಸ್ ತನಿಖೆಯಿಂದ ಸತ್ಯ ತಿಳಿದು ಬರಬೇಕಿದೆ.