ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹು ನಿರೀಕ್ಷಿತ ‘ಕೇಡಿ’ ಚಿತ್ರ ಸದ್ಯ ಸ್ಯಾಂಡಲ್ವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿದ್ದು, ಧ್ರುವ ಸರ್ಜಾ ಅವರನ್ನು ಮತ್ತೊಮ್ಮೆ ತೆರೆ ಮೇಲೆ ವೀಕ್ಷಿಸಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಕೇಡಿ ಚಿತ್ರದ ಮೊದಲ ಗೀತೆ ಆಗಸ್ಟ್ 24ರಂದು ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದು, ನಿರ್ದೇಶಕ ಪ್ರೇಮ್ ಸೇರಿದಂತೆ 5 ಸಾಹಿತಿಗಳು ಬೇರೆ ಬೇರೆ ಭಾಷೆಗಳಲ್ಲಿ ಈ ಹಾಡನ್ನು ಬರೆದಿದ್ದಾರೆ.
ಜೋಗಿ ಪ್ರೇಮ್ ನಿರ್ದೇಶನದ ಈ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದು, ಇನ್ನುಳಿದಂತೆ ರಮೇಶ್ ಅರವಿಂದ್, ಕ್ರೇಜಿಸ್ಟಾರ್ ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಸೇರಿದಂತೆ ನೋರಾ ಫತೇಹಿ ತೆರೆ ಹಂಚಿಕೊಂಡಿದ್ದಾರೆ.
ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದು, ಶ್ರೀನಿವಾಸ್ ಪಿ ಬಾಬು ಸಂಕಲನ, ವಿಲಿಯಂ ಡೇವಿಡ್ ಛಾಯಾಗ್ರಾಹಣವಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.