alex Certify BREAKING : ಮಾಜಿ ಸಿಎಂ ‘BSY’ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಸಿಎಂ ‘BSY’ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟ ಘಟನೆ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ನಡೆದಿದೆ.

ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...