ಬೆಂಗಳೂರು : ಸಚಿವ ಜಮೀರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸಚಿವ ಜಮೀರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಮಾಡಿದೆ.
ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಜಮೀರ್ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ ಶ್ರೀಧರ್ ಎಂಬುವವರು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಕೋರ್ಟ್ ಚುನಾವಣಾ ಗ್ಯಾರಂಟಿಗಳು ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ , ಸಚಿವ ಜಮೀರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಮಾಡಿದೆ.