HomeKarnatakaBIG NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಸಂಕಷ್ಟ

BIG NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಸಂಕಷ್ಟ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ.

ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಬಂಧನ ಭೀತಿ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular