ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ವೇದಿಕೆ ಕುಸಿದು ಬಿದ್ದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.
ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.
ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಪುತ್ರಿ ಮತ್ತು ಪಾಟಲೀಪುತ್ರ ಲೋಕಸಭಾ ಅಭ್ಯರ್ಥಿ ಮಿಸಾ ಭಾರತಿ ಅವರ ಪರವಾಗಿ ಪ್ರಚಾರ ಮಾಡಲು ಅವರು ಸೋಮವಾರ ಬಿಹಾರದ ರಾಜಧಾನಿ ಪಾಟ್ನಾದ ಹೊರವಲಯದಲ್ಲಿರುವ ಪಾಲಿಗಂಜ್ ಗೆ ಹೋಗಿದ್ದರು. ರಾಹುಲ್ ಗಾಂಧಿ ಅವರು ವೇದಿಕೆಯಲ್ಲಿದ್ದಾಗಲೇ ವೇದಿಕೆ ಕೆಳಗ್ಗೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ.ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದರಲ್ಲಿ ರಾಹುಲ್ ಗಾಂಧಿ ಮತ್ತು ಇತರ ನಾಯಕರು ನಿಂತಿರುವ ವೇದಿಕೆ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ಕಾಣಬಹುದು.