alex Certify BIG NEWS: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಜೂ. 1ರಂದು ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಜೂ. 1ರಂದು ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮೊದಲೇ ಜೂನ್ 1 ರಂದು ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಾಧನೆ ಮುಂದಿನ ರಣತಂತ್ರದ ಬಗ್ಗೆ ಜೂನ್ ಸಭೆಯಲ್ಲಿ ಚರ್ಚಿಸಲಾಗುವುದು.

ಜೂನ್ 1ರಂದು 7ನೇ ಹಾಗೂ ಕೊನೆ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ಮಹತ್ವ ಪಡೆದುಕೊಂಡಿದೆ.

ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ನಡೆಯುವ ದಿನವಾದ ಜೂನ್ 1(ಶನಿವಾರ) ರಂದು ಸಭೆ ನಡೆಸಲಾಗುವುದು. ಚುನಾವಣಾ ಫಲಿತಾಂಶಗಳು ಪ್ರಕಟವಾಗುವ 4 ದಿನಗಳ ಮೊದಲು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಇಂಡಿಯಾ ಬ್ಲಾಕ್‌ನ ಎಲ್ಲಾ ಮೈತ್ರಿ ಪಾಲುದಾರರನ್ನು ಆಹ್ವಾನಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿನ ಸಾಧನೆಯನ್ನು ಗಮನದಲ್ಲಿಟ್ಟುಕೊಂಡು ಮೈತ್ರಿಕೂಟದ ಮುಂದಿನ ಕ್ರಮಗಳನ್ನು ಪರಿಶೀಲಿಸಲು ಮತ್ತು ಚರ್ಚಿಸಲು ಸಭೆಯನ್ನು ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...