HomeKarnatakaಸಿಲಿಕಾನ್ ಸಿಟಿ ಈಗ ಗುಂಡಿಗಳ ನಗರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಸಿಲಿಕಾನ್ ಸಿಟಿ ಈಗ ಗುಂಡಿಗಳ ನಗರ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಸಿಲಿಕಾನ್ ಸಿಟಿ ಬೆಂಗಳೂರನ್ನು ಗುಂಡಿಗಳ ನಗರವನ್ನಾಗಿ ಮಾಡಿ, ಅನೈತಿಕ ಚಟುವಟಿಗಳ ರಾಜಧಾನಿಯನ್ನಾಗಿಸಿ, ಅಭಿವೃದ್ಧಿಯನ್ನು ಮರೆತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡೋಣ, ಅಸಮರ್ಥ ಸರ್ಕಾರವನ್ನು ಕಿತ್ತು ಎಸೆಯೋಣ ಎಂದು ಕರೆ ಕೊಟ್ಟಿದ್ದ ಬಿಜೆಪಿ ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಮರೆತ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಿ. ವಿ. ಸದಾನಂದ ಗೌಡ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವರುಗಳಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ್‌, ಮುನಿರತ್ನ, ಕೆ. ಗೋಪಾಲಯ್ಯ, ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥ ನಾರಾಯಣ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ. ಕೆ. ರಾಮಮೂರ್ತಿ, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಪಕ್ಷದ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular