ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2 ಇನ್ನೇನು ಆಗಸ್ಟ್ 15ಕ್ಕೆ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಪುಷ್ಪ 2 ಸಿನಿಮಾದ ಟೀಸರ್ ಮತ್ತು ಮೊದಲ ಹಾಡು ಇತ್ತೀಚಿಗಷ್ಟೇ ಬಿಡುಗಡೆಯಾಗಿ ಯೂಟ್ಯೂಬಲ್ಲಿ ಧೂಳೆಬ್ಬಿಸಿದ್ದು, ಇದೀಗ ಮತ್ತೊಂದು ಹಾಡು ರಿಲೀಸ್ ಗೆ ರೆಡಿಯಾಗಿದೆ. ಕೂಪಲ್ ಸಾಂಗ್ ಇದಾಗಿದ್ದು, ಖ್ಯಾತ ಗಾಯಕಿ ಶ್ರೇಯಾ ಗೋಶಾಲ್ ಧ್ವನಿಯಾಗಿದ್ದಾರೆ. ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದಾರೆ. ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಲಿದೆ.
ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ಫಹಾದ್ ಫಾಸಿಲ್, ಜಗಪತಿ ಬಾಬು, ಪ್ರಕಾಶ್ ರಾಜ್, ಅನಸೂಯಾ ಭಾರದ್ವಾಜ್, ಪ್ರಿಯಾಮಣಿ, ಸಾಯಿ ಪಲ್ಲವಿ, ವಿಜಯ್ ಸೇತುಪತಿ, ಶ್ರೀತೇಜ್, ಉಳಿದ ಪಾತ್ರವರ್ಗದಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಲ್ಲಿ ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್ ನಿರ್ಮಾಣ ಮಾಡಿದ್ದಾರೆ.ನವೀನ್ ನೂಲಿ ಸಂಕಲನ, ಮಿರೋಸ್ಲಾ ಕುಬಾ ಬ್ರೋಜೆಕ್ ಛಾಯಾಗ್ರಹಣವಿದೆ.