alex Certify ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭ ; ಮೇ 31 ರಂದು ಏಕಕಾಲಕ್ಕೆ ಪ್ರಾರಂಭೋತ್ಸವ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭ ; ಮೇ 31 ರಂದು ಏಕಕಾಲಕ್ಕೆ ಪ್ರಾರಂಭೋತ್ಸವ.!

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ.

2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ರಾಜ್ಯ ಸರ್ಕಾರ ಸೂಚಿಸಿದೆ.

ಈ ಬಾರಿ ಶಾಲೆಗೆ ಮಕ್ಕಳು ಬರುತ್ತಿದ್ದಂತೆ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ನೀಡಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಹಾಗೂ ನಾಳೆಯಿಂದಲೇ ಮಕ್ಕಳಿಗೆ ಕ್ಷೀರಭಾಗ್ಯ, ಬಿಸಿಯೂಟ ನೀಡಲು ಆದೇಶ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...