alex Certify BIG NEWS: ಯಾಂತ್ರೀಕೃತ ಮೀನುಗಾರಿಕೆಗೆ 61 ದಿನಗಳ ಕಾಲ ನಿಷೇಧ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯಾಂತ್ರೀಕೃತ ಮೀನುಗಾರಿಕೆಗೆ 61 ದಿನಗಳ ಕಾಲ ನಿಷೇಧ: ಇಲ್ಲಿದೆ ಮಾಹಿತಿ

ಉಡುಪಿ: ಮಳೆಗಾಲ ಆರಂಭ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೀನುಗಾರರಿಗೆ ಕಟ್ಟೆಚ್ಚರ ಸೂಚಿಸಲಾಗಿದ್ದು, ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ರಾಜ್ಯದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ)ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್ ಬೋರ್ಡ್ ಅಥವಾ ಔಟ್ ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಗಳನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೋಣಿಗಳನ್ನು ಬಳಸುವುದಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ಅಥವಾ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಮೀನುಗಾರಿಕೆ ನಿಟ್ಟಿನಲ್ಲಿ ಸರ್ಕಾರಿ ಆದೇಶ ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಹಾಗೂ ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗಬೇಕಾಗುತ್ತದೆ. ಅಲ್ಲದೇ ಒಂದು ವರ್ಷ ಡೆಲಿವರಿ ಪಾಯಿಮ್ಟ್ ನಲ್ಲಿ ರಾಜ್ಯ ಮಾರಾಟಕರ ರಹಿತ ಡಿಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶ ಕರಾವಳಿ ಭಾಗದ ಎಲ್ಲಾ ಮೀನುಗಾರರಿಗೆ ಅನ್ವಯವಾಗಲಿದೆ ಎಂದು ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...