ಬೆಂಗಳೂರು : ಬೆಂಗಳೂರು ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳವಾಗಿದ್ದು, ಪೋಷಕರು ಸಿಡಿದೆದ್ದಿದ್ದಾರೆ.ಖಾಸಗಿ ಶಾಲೆಗಳಲ್ಲಿ ಶುಲ್ಕ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಆ ಶಾಲಾ ಮಕ್ಕಳ ಪಾಲಕರು ಚಿಂತಿತರಾಗಿದ್ದಾರೆ.
ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ. ಇದರ ನಡುವೆ ಖಾಸಗಿ ಶಾಲೆ ಮುಂಭಾಗದಲ್ಲಿ ಪೋಷಕರು ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳವಾಗಿದ್ದು, ಪೋಷಕರು ಸಿಡಿದೆದ್ದಿದ್ದಾರೆ.
ಖಾಸಗಿ ಶಾಲಾ ಆಡಳಿತ ಮಂಡಳಿಗಳು ದುಬಾರಿ ಶುಲ್ಕ ವಿಧಿಸುತ್ತಿದೆ. ನಮಗೆ ಶುಲ್ಕ ಪಾವತಿಸಲು ಕಷ್ಟ ಆಗುತ್ತಿದೆ ಎಂದು ಪೋಷಕರು ನೋವು ತೋಡಿಕೊಂಡಿದ್ದಾರೆ.