HomeKarnataka1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಎರಡು ಜೊತೆ ಸಾಕ್ಸ್, ಒಂದು ಜೊತೆ...

1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಎರಡು ಜೊತೆ ಸಾಕ್ಸ್, ಒಂದು ಜೊತೆ ಶೂ ವಿತರಣೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 1ರಿಂದ 10ನೇ ತರಗತಿ ಮಕ್ಕಳಿಗೆ ಉಚಿತವಾಗಿ ಶೂ, ಸಾಕ್ಸ್ ವಿತರಿಸಲಾಗುವುದು.

2024 -25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 42.65 ಲಕ್ಷ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಒಟ್ಟು 121 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆ ವಿತರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ ಉತ್ತಮ ಗುಣಮಟ್ಟದ ಪಾದರಕ್ಷೆಗಳನ್ನು ಸ್ಥಳೀಯವಾಗಿ ಖರೀದಿಸಿ ವಿತರಿಸುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಎಸ್.ಡಿ.ಎಂ.ಸಿ.ಗೆ ವಹಿಸುವುದು. ಒಂದು ಜೊತೆ ಕಪ್ಪು ಬಣ್ಣದ ಶೂಗಳನ್ನು, ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ ಗಳನ್ನು ಖರೀದಿಸಿ ವಿತರಿಸಲಿದ್ದು, ಸ್ಥಳೀಯ ವಾತಾವರಣಕ್ಕೆ ಅನುಗುಣವಾಗಿ ಶೂ, ಸಾಕ್ಸ್ ಗಳ ಬದಲಿಗೆ ಪಾದರಕ್ಷೆಗಳನ್ನು ಖರೀದಿಸಿ ವಿತರಿಸಲು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular