HomeAgricultureಬೆಳೆ ವಿಮೆ ಬಗ್ಗೆ ರಾಜ್ಯದ ರೈತರಿಗೆ ಬಿಗ್ ಅಪ್ ಡೇಟ್ : ಈ ಕೆಲಸ ಮಾಡಲು...

ಬೆಳೆ ವಿಮೆ ಬಗ್ಗೆ ರಾಜ್ಯದ ರೈತರಿಗೆ ಬಿಗ್ ಅಪ್ ಡೇಟ್ : ಈ ಕೆಲಸ ಮಾಡಲು ಸರ್ಕಾರ ಸೂಚನೆ..!

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್ ಅವರು ತಿಳಿಸಿದ್ದಾರೆ.

ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು.

*ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಇಂತಿವೆ:* ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ 16 ಕೊನೆಯ ದಿನ ಮತ್ತು ಎಳ್ಳು ಬೆಳೆಗೆ ವಿಮೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಮತ್ತು ಗ್ರಾಮಪಂಚಾಯತ್ಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.

ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular