alex Certify BIG NEWS: ನನ್ನ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ; ಪಂಚ ಬಲಿ ಕೊಡುತ್ತಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ; ಪಂಚ ಬಲಿ ಕೊಡುತ್ತಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: ಕೇರಳದಲ್ಲಿ ನನ್ನ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ನನ್ನ ವಿರುದ್ಧ ಶತ್ರ ಭೈರವಿ ಯಾಗ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಘೋರಿಗಳ ಮೂಲಕ ಈ ಯಾಗ ಮಾಡಿಸುತ್ತಿದ್ದಾರೆ. ಪಂಚ ಬಲಿ ಕೊಡುತ್ತಿದ್ದಾರೆ. 21 ಮೇಕೆ, 3 ಎಮ್ಮೆ, 21 ಕಪ್ಪು ಕುರಿ, 5 ಹಂದಿಗಳನ್ನು ಬಲಿ ಕೊಡುತ್ತಿದ್ದಾರೆ. ನನ್ನ ಮೇಲೆ ದೊಡ್ಡ ಪ್ರಯೋಗ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಯಾಗ ನಡೆಯುತ್ತಿದೆ. ಯಾವ ಪೂಜೆ, ಯಾರು ಮಾಡುತ್ತಿದ್ದಾರೆ ಎಲ್ಲಾ ಗೊತ್ತಿದೆ. ನನ್ನ, ಸಿಎಂ ಹಾಗೂ ಸರ್ಕಾರದ ವಿರುದ್ಧ ಪೂಜೆ ಮಡುತ್ತಿದ್ದಾರೆ. ಅವರ ಪ್ರಯತ್ನ ನಡೀತಾ ಇದೆ. ನಾವು ನಂಬಿರುವ ದೇವರು ನಮ್ಮನ್ನು ಕಾಪಾಡುತ್ತಾನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...