HomeKarnatakaಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿಲ್ಲ: ಸುಳ್ಳು ಸುದ್ದಿ ಹರಡಿದ್ರೆ ಕ್ರಮ: ಎಸ್.ಪಿ. ಉಮಾ ಪ್ರಶಾಂತ್

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿಲ್ಲ: ಸುಳ್ಳು ಸುದ್ದಿ ಹರಡಿದ್ರೆ ಕ್ರಮ: ಎಸ್.ಪಿ. ಉಮಾ ಪ್ರಶಾಂತ್

ದಾವಣಗೆರೆ: ಚನ್ನಗಿರಿ ಗಲಾಟೆ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದರೆ ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಮೇ 24 ರಂದು ಚನ್ನಗಿರಿ ಠಾಣೆ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಲಾಗಿತ್ತು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು. ಘೋಷಣೆ ಕೂಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಪರಿಶೀಲಿಸಲಾಗಿದ್ದು, ಮೇಲ್ನೋಟಕ್ಕೆ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿಲ್ಲ ಎಂದು ತಿಳಿಸಿದ್ದಾರೆ.

ಪರಿಶೀಲಿಸಲಾದ ವಿಡಿಯೋದಲ್ಲಿ ಪೊಲೀಸರಿಗೆ ಧಿಕ್ಕಾರ ಎಂದು ಕೂಗಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ವಿಡಿಯೋ ಲಭ್ಯವಿದ್ದಲ್ಲಿ ಮಾಹಿತಿ ನೀಡಬಹುದು. ಜಿಲ್ಲಾ ಪೊಲೀಸ್ ಕಚೇರಿ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್.ಪಿ. ಉಮಾ ಪ್ರಶಾಂತ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular