ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ 34 ದಿನಗಳ ನಂತರ ವಿದೇಶದಿಂದ ಆಗಮಿಸಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ.
ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ವಶಕ್ಕೆ ಪಡೆದುಕೊಂಡ ಎಸ್ಐಟಿ ವಿಮಾನ ನಿಲ್ದಾಣದಿಂದ ಎಸ್ಐಟಿ ಕಚೇರಿಗೆ ಕರೆತಂದಿದೆ. ಚಾಲುಕ್ಯ ಸರ್ಕಲ್ ಎಸ್ಐಟಿ ಕಚೇರಿ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇಂದು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗೆ ಕಸ್ಟಡಿಗೆ ಪಡೆಯಲು ಎಸ್ಐಟಿ ಮುಂದಾಗಿದೆ.
#WATCH | Karnataka: Suspended JD(S) leader Prajwal Revanna, who is facing sexual abuse charges was brought to the CID office, in Bengaluru.
He has been arrested by SIT and is likely to be brought to the government hospital for medical examination. pic.twitter.com/ndKZghNpvD
— ANI (@ANI) May 30, 2024

