alex Certify GOOD NEWS : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ-ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ, ಶೀಘ್ರದಲ್ಲೇ ಖಾಲಿಯಿರುವ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾಲ್ಕು ಸಾರಿಗೆ ನಿಗಮಗಳಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 500 ಕ್ಕೂ ಹೆಚ್ಚು ಅನುಕಂಪದ ಆಧಾರದ ಮೇಲೆ ನೇಮಕಾತಿ ಪತ್ರವನ್ನು ಸಿಬ್ಬಂದಿಗಳ ಅವಲಂಬಿತರಿಗೆ ನೀಡಲಾಗಿದೆ. ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇ ಆರ್ ಅಶೋಕ್ ಅವರೇ?

ನಾವು ನುಡಿದಂತೆ ನಡೆಯುವವರು, ತಮ್ಮಂತೆ ಬರೀ ಭಾಷಣದಲ್ಲಿ ಕೋಟಿ ಕೋಟಿ ಉದ್ಯೋಗ ಭಾಗ್ಯ ಕರುಣಿಸಿ, ಯುವಜನರನ್ನು ಶೋಷಿಸುವ ಕಾರ್ಯ ಮಾಡಿಲ್ಲ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ, ಡಕೋಟ ಬಸ್ಸುಗಳನ್ನು ದಯಪಾಲಿಸಿರುವ ನೀವು ಮಾತನಾಡುವ ಪರಿಗೆ ವಿಷಾದವಲ್ಲದೇ ಮತ್ತೇನು ವ್ಯಕ್ತಪಡಿಸಲು ಸಾಧ್ಯ? ತಮ್ಮ ಬೇಜಾವಬ್ದಾರಿ, ಆಧಾರರಹಿತ, ತಪ್ಪು ಹೇಳಿಕೆಗಳಿಗೆ ಸಂತಾಪ ಸೂಚಿಸುತ್ತಾ ನಿಮಗೆ ನೀವು ನಂಬಿರುವ ದೇವರು ಸತ್ಯ ಹೇಳುವ ಸದ್ಬುದ್ದಿಯನ್ನು ಕರುಣಿಸಲು ಎಂದು ಹಾರೈಸುತ್ತೇನೆ.

ಯುವಕರಿಗೆ ಅದರಲ್ಲಿಯೂ ರಾಜ್ಯದ ಯುವಕರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಲು ಕಾರಣವಾದ ಕೇಂದ್ರ ಸರ್ಕಾರದ ಈ ಯೋಜನೆಯ ಬಗೆಗಿನ ತಮ್ಮ ನೋವು, ದುಃಖ ಮತ್ತು ಸಂಕಟಗಳಿಗೆ ಉತ್ತರ ಕಂಡುಕೊಳ್ಳುವ ತವಕ ನಿಮ್ಮಲ್ಲಿದ್ದರೆ ದಯವಿಟ್ಟು ನಿಮ್ಮ ಪೂಜ್ಯ ಪ್ರಧಾನಮಂತ್ರಿ ಮೋದಿ ಅವರನ್ನು ಕೇಳಿ ಉತ್ತರ ಪಡೆಯಿರಿ, ಅಸಂಬದ್ಧ ಟ್ವೀಟ್ ಗಳ ಮೂಲಕ ನಿಮ್ಮ ಅಜ್ಞಾನವನ್ನು ಪ್ರದರ್ಶಿಸಬೇಡಿ ಆರ್ ಅಶೋಕ್ ಅವರೇ. ರಾಜ್ಯದ ಬಿಜೆಪಿ ನಾಯಕರೇ, ನಿಮ್ಮ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ ಮೇಲೆ ರೂ.5,900 ಕೋಟಿ ಸಾಲ ಮಾಡಿ ಆ ಹೊರೆಯನ್ನು ನಮ್ಮ ತಲೆ ಮೇಲೆ ಹೊರೆಸಿ ಹೋಗಿದ್ದೀರಿ. ಶಾಂತಿನಗರ ಟಿ.ಟಿ.ಎಂ.ಸಿ ಯನ್ನು ಸಾಲ ಪಡೆಯಲು ಅಡವಿಟ್ಟಿದ್ದು, ತಮ್ಮ ಆಡಳಿತ ಅವಧಿಯಲ್ಲಿಯೇ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲವೆನಿಸುತ್ತದೆ. ಸಾರಿಗೆ ಸಂಸ್ಥೆಗಳಲ್ಲಿ 14,000 ಹುದ್ದೆಗಳು ಖಾಲಿಯಿದ್ದರೂ, ತಮ್ಮ ಅವಧಿಯಲ್ಲಿ ಒಂದೇ ಒಂದು ನೇಮಕಾತಿ ಮಾಡದೆ, ನಮ್ಮ ಅವಧಿಯಲ್ಲಿ ಹೊರಡಿಸಲಾಗಿದ್ದ ನೇಮಕಾತಿ ಪ್ರಕಟಣೆಗಳಿಗೂ ತಡೆತಂದಿರುವುದನ್ನು ಮರೆತು ಬಿಟ್ಟಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...