ದಾವಣಗೆರೆ : ನೇಣು ಬಿಗಿದುಕೊಂಡು ಕಂಟ್ರಾಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಪಿಎಸ್ ಗೌಡರ್ ಎಂಬುವವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ ಆರ್ ಐ ಡಿ ಎಲ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಹಣಕಾಸು ವಿಚಾರದಲ್ಲಿ ಇಬ್ಬರು ಸಹೋದರರು ನನಗೆ ಮೋಸ ಮಾಡಿದ್ದಾರೆ ಎಂದು ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ ಆರ್ ಐ ಡಿ ಎಲ್ ಅಧಿಕಾರಿಗಳು ಕಾಮಗಾರಿ ನಡೆಸಿದ್ದ ಹಣ ನೀಡದೇ ಸತಾಯಿಸಿದ್ದಾರೆ ಎಂದು ಪಿಎಸ್ ಗೌಡರ್ ಡೆತ್ ನೋಟ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.