ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಶತ್ರು ಸಂಹಾರ ಪೂಜೆ ಮಾಡಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಕೇರಳ ರಾಜರಾಜೇಶ್ವರಿ ದೇವಾಲಯದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ. ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ. ಕೆಲವು ದಿನಗಳ ಹಿಂದೆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ‌ಭೇಟಿ‌ ನೀಡಿ ದೇವಿಯ ಆಶೀರ್ವಾದ ಪಡೆದಿದ್ದೆ. ವಿಷಯಗಳನ್ನು ಸಂದರ್ಭದಿಂದ ಹೊರಗಿಟ್ಟು ಅವುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ವಿನಂತಿಸಿದ್ದಾರೆ.

https://www.facebook.com/watch/?mibextid=oFDknk&v=757890799837171&rdid=LStjmJSN8ELarsXd

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read