HomeKarnatakaವಿಧಾನ ಪರಿಷತ್ ಚುನಾವಣೆ ಮತದಾರರಿಗೆ ಗುಡ್ ನ್ಯೂಸ್

ವಿಧಾನ ಪರಿಷತ್ ಚುನಾವಣೆ ಮತದಾರರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು, ಮತದಾರರ ಸಹಾಯಕ್ಕೆ ಸಹಾಯವಾಣಿ ಸ್ಥಾಪಿಸಲಾಗಿದೆ.

ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿನ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕುಗಳ ಶಿಕ್ಷಕ ಮತದಾರರು ಹಾಗೂ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ಮತದಾರರಿಗೆ ಸಹಕರಿಸುವ ನಿಟ್ಟಿನಲ್ಲಿ ಜಿಲ್ಲಾ ಸಹಾಯವಾಣಿ ಕೇಂದ್ರ 24*7 ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತದಾರರಿಗೆ ಅಗತ್ಯವಿರುವ ಮಾಹಿತಿಯನ್ನು ಟೋಲ್ ಫ್ರೀ 18004250380 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular